ಹುಬ್ಬಳ್ಳಿ | ಟ್ರ್ಯಾಕ್ಟರ್ - ಟ್ಯಾಂಕರ್ ಮಧ್ಯೆ ಅಪಘಾತ: ಏಳು ಮಂದಿಗೆ ಗಾಯ

Update: 2024-09-18 09:51 GMT

ಹುಬ್ಬಳ್ಳಿ: ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಟ್ರ್ಯಾಕ್ಟರ್ ನಲ್ಲಿದ್ದ ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ನಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ಜಮೀನು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಬಂದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತ ಎಸಗಿದ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News