ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ : ಕೆ.ಎಸ್‌.ಈಶ್ವರಪ್ಪ

Update: 2024-10-07 12:54 GMT

ಹುಬ್ಬಳ್ಳಿ : "ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ" ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, " ನಾವು ಬಿಜೆಪಿ ಪಕ್ಷ ಕಟ್ಟುತ್ತಿದ್ದ ಸಂದರ್ಭದಲ್ಲಿ  ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ. ಇವರು ಪಕ್ಷವನ್ನು ಕಂಡಿದ್ದು ಈಗ.  ನನ್ನ ಬಗ್ಗೆ ಏನು ಮಾತನಾಡುತ್ತಾರೆ. ಪಕ್ಷಕ್ಕಾಗಿ ದುಡಿದವರ ಬಗ್ಗೆ ಹಗುರುವಾಗಿ ಮಾತನಾಡುವುದೇ ಇವರ ಕೊಡುಗೆ" ಎಂದು ಟೀಕಿಸಿದರು.

"ಗೃಹ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ ಅವರ ಆಶೀರ್ವಾದದಿಂದ ರಾಜ್ಯಾಧ್ಯಕ್ಷ ಆಗಿದ್ದೇನೆ. ನನ್ನನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿಕೊಂಡು ಓಡಾಡುತ್ತಿದ್ದಾರೆ. ಇವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಕ್ಷಕ್ಕೆ ದುಡಿದ ಹಿರಿಯರು ವಿರೋಧ ಮಾಡಿದ್ದರು" ಎಂದು ತಿಳಿಸಿದ್ದಾರೆ.

ಸಂಘಟನೆ ಕಟ್ಟುತ್ತಿದ್ದೇವೆ :ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ.ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ ಕೈಗೊಳ್ಳುತ್ತೇವೆ. ಹುಬ್ಬಳ್ಳಿಯಲ್ಲಿ ಎಲ್ಲ ಜಾತಿಯವರನ್ನು ಸೇರಿಸಿ ಮೊದಲ ಸಭೆ ಮಾಡಿದ್ದೇವೆ. ಎಲ್ಲ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆ ಬಂದಿವೆ ಎಂದು ಈಶ್ವರಪ್ಪ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News