ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಯಲ್ಲೇ ಇರುತ್ತಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-02-23 09:20 GMT

ಹುಬ್ಬಳ್ಳಿ : ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, " ಸುಮಲತಾ ಅವರು ಬಿಜೆಪಿಯಲ್ಲಿ ಇರುತ್ತಾರೆ . ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಟಿಕೆಟ್ ಹಂಚಿಕೆಯಾಗಲಿದೆ. ಕುಮಾರಸ್ವಾಮಿ ಅವರು ಯಾವ ಕಾರಣಕ್ಕೆ ತಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ ಎಂದು ಪ್ರತಿಕ್ರಿಯಿಸಿದರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News