ರಾಜ್ಯದಲ್ಲಿ ವಿಪಕ್ಷ ಹಣಿಯಲು ಹಿರಿಯ ಅಧಿಕಾರಿಗಳ ದುರುಪಯೋಗ: ಬೊಮ್ಮಾಯಿ ಆರೋಪ

Update: 2024-09-30 07:59 GMT

ಹುಬ್ಬಳ್ಳಿ: ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತು ಬರುತ್ತಿವೆ. ಇಂತಹ ಕೆಳಮಟ್ಟದ ರಾಜಕೀಯ ಹಿಂದೇಂದು ಆಗಲಿಲ್ಲ. ತಮ್ಮ ಮೇಲೆ ಆರೋಪದ ಕಪ್ಪು ಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನ ಆಗುತ್ತಿದೆ. ಇದು ಬಹಳಷ್ಟು ದಿನ ನಡೆಯುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಸಿಎಂ ಆಗಲು ಕೆಲವರು ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯತ್ನಾಳ್ ರಿಗೆ ಯಾವ ಮಾಹಿತಿಯಿದೆ ಅವರನ್ನೇ ಕೇಳಬೇಕು. ನನಗೇನು ಮಾಹಿತಿ ಇಲ್ಲ. ಅವರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದನ್ನು ಅವರಿಗೆ ಕೇಳಿ ಎಂದು ಹೇಳಿದರು.

ಮುಡಾ ಹಗರಣದಲ್ಲಿ ದೂರುದಾರ ಇಡಿಗೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಏನು ಆಗುತ್ತದೆ ಅಂತ ಕಾದು ನೋಡೋಣ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News