ನೇಹಾ ಹತ್ಯೆ ಪ್ರಕರಣ | ಆರೋಪಿಯನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ : ಬೊಮ್ಮಾಯಿ

Update: 2024-04-22 10:39 GMT

ಹಾವೇರಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ಇದು ವಯಕ್ತಿಕ ವಿಚಾರವಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಅತ್ಯಂತ ದುಖಃ ಆಘಾತದ ಸಂದರ್ಭದಲ್ಲಿ ಸೇರಿದ್ದೇವೆ. ಹೆ‍ಣ್ಣು ಮಕ್ಕಳು ಮಾತನಾಡಿದ್ದು ಕರಳು ಕಿತ್ತು ಬರುವಂತಿದೆ. ಅವನು ಹಾಡಹಗಲೇ ಭಯಂಕರ ಕೊಲೆ ಮಾಡಿದ್ದಾನೆ ಎಂದರೆ ಅವನು ಒಬ್ಬನೇ ಇಲ್ಲ. ಇದು ಕೇವಲ ವಯಕ್ತಿಕ ವಿಚಾರ ಅಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಹೇಳಿದರು.

ನಾವು ಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ. ರಾಜ್ಯ ಸರ್ಕಾರದ ನಡವಳಿಕೆ ಅವರಿಗೆ ಬೇಸರ ತರಿಸಿದೆ. ಈ ಪ್ರಕರಣವನ್ಬು ಸಿಬಿಐಗೆ ಕೊಡಬೇಕು ಎಂದು ಹೆಳಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ನೇಹಾಗೆ ನ್ಯಾಯ ಸಿಗುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದೊಂದೇ ಪ್ರಕರಣ ಅಲ್ಲ. ಹಾವೇರಿಯಲ್ಲಿ ಅಲ್ಪ ಸಂಖ್ಯಾತರ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದಾಗ ರಾಜ್ಯ ಸರ್ಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದ್ದರು. ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದರು. ರಾಜ್ಯದಲ್ಲಿ ಒಂದೇ ಕೊಮಿನ ಹೆಣ್ಣು ಮಕ್ಕಳು ಯಾಕೆ ಸಾಯುತ್ತಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News