ಸರ್ಕಾರ, ಪೊಲೀಸ್ ಆಯುಕ್ತರ ಕ್ಷಮೆಯಾಚಿಸಿದ ನೇಹಾಳ ತಂದೆ ನಿರಂಜನಯ್ಯ

Update: 2024-04-23 09:56 GMT

ಹುಬ್ಬಳ್ಳಿ: ನಾನು ತಪ್ಪಾಗಿ ಮಾತನಾಡಿದ್ದರೆ ಕ್ಷಮಿಸಿ. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇನೆ. ಅಲ್ಲದೇ ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೇನೆ ಎಂದು ಸರ್ಕಾರಕ್ಕೆ ಹಾಗೂ ಪೊಲೀಸ್ ಆಯುಕ್ತರಿಗೆ ಮೃತ ನೇಹಾಳ ತಂದೆ ನಿರಂಜನಯ್ಯ ಹಿರೇಮಠ ಕ್ಷಮೆಯಾಚನೆ ಮಾಡಿದ್ದಾರೆ.

ಸಚಿವ ಎಚ್.ಕೆ.ಪಾಟೀಲ ಭೇಟಿ ವೇಳೆ ಮಾತನಾಡಿದ ಅವರು, ಸ್ಥಳೀಯ ಶಾಸಕರು, ಜಿಲ್ಲಾಧ್ಯಕ್ಷರು ಎಲ್ಲ ಮುಖಂಡರು ನಮ್ಮ ಪರ ನಿಂತಿದ್ದಾರೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಣಯಕ್ಕೆ ಧನ್ಯವಾದ ಹೇಳುತ್ತೇ ನೆ. ಕಾನೂನಿನ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬೆನ್ನ ಹಿಂದೆ ಸರ್ಕಾರ ಕೆಲಸ ಮಾಡಿದೆ. ಸಿಎಂ ಸಾಂತ್ವನ ಹೇಳಲು ಬರೋದಾಗಿ ಹೇಳಿದ್ದಾರೆ ಎಂದರು.

ವಿಶೇಷ ಕೋರ್ಟ್ ಗೆ ನೇಹಾ ಹಿರೇಮಠ್ ಅಂತ ಹೆಸರಿಡಬೇಕು, ಕಾಯ್ದೆಗೂ ಅವರ ಹೆಸರಿಡಿ. ನೇಹಾಳ ಸಾವಿಗೆ ನ್ಯಾಯ ಸಿಗಬೇಕು. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ಅವರು ಹೇಗೆ ತನಿಖೆ ಮಾಡ್ತಾರೋ ಮಾಡಲಿ. ಪೊಲೀಸ್ ಇಲಾಖೆ ಸರಿಯಾಗಿ ತನಿಖೆ ಮಾಡ್ತಿಲ್ಲ ಅಂತ ಆರೋಪ ಮಾಡಿದ್ದೆ. ನಿಷ್ಪಕ್ಷವಾಗಿ ತನಿಖೆ ನಡೆದಿರೋದು ನನಗೆ ಗೊತ್ತಾಗಿದೆ. ಮಾಹಿತಿ ಕೊರತೆಯಿಂದ ಮಾತನಾಡಿದ್ದೇನೆ. ಪೊಲೀಸ್ ಇಲಾಖೆಯ ಕ್ಷಮೆ ಕೇಳ್ತೇನೆ. ಆತಂಕದಲ್ಲಿ ನಾನು ಕೆಲ ಹೇಳಿಕೆ ನೀಡಿದೆ. ಕಾಣದ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿದ್ಯಾರ್ಥಿನಿಯರು ನಿರ್ಭಯವಾಗಿ ಕಾಲೇಜಿಗೆ ಹೋಗುವಂತಾಗಬೇಕು ಅನ್ನೋದೇ ನನ್ನ ಆಸೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News