ನೇಹಾ ಹಿರೇಮಠ್ ಸಾವಿಗೆ ಆದಷ್ಟು ಬೇಗ ನ್ಯಾಯ ಸಿಗುತ್ತದೆ : ಸಚಿವ ಎಚ್.ಕೆ.ಪಾಟೀಲ್ ಭರವಸೆ

Update: 2024-04-23 15:17 IST
ನೇಹಾ ಹಿರೇಮಠ್ ಸಾವಿಗೆ ಆದಷ್ಟು ಬೇಗ ನ್ಯಾಯ ಸಿಗುತ್ತದೆ : ಸಚಿವ ಎಚ್.ಕೆ.ಪಾಟೀಲ್ ಭರವಸೆ
  • whatsapp icon

ಹುಬ್ಬಳ್ಳಿ : ನ್ಯಾಯದಾನ ವಿಳಂಬವಾಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದ್ದು, ಇವತ್ತು ಹೈಕೋರ್ಟ್‌ಗೆ ವಿಶೇಷ ನ್ಯಾಯಾಲಯ ಸ್ಥಾಪನೆಯ ಪತ್ರ ತಲುಪುತ್ತದೆ. ತಪ್ಪಿಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲಾಗಿಲ್ಲ. ಇವತ್ತು ನಿರಂಜನಯ್ಯ ಹಿರೇಮಠ ಜೊತೆ ಸಿಎಂ ಮಾತನಾಡಿದ್ದು, ಮುಖ್ಯಮಂತ್ರಿಗಳು ಸಾಂತ್ವನ ಹೇಳಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

 ದೂರವಾಣಿ ಕರೆ ಮಾಡಿದ ಧೈರ್ಯ ತುಂಬಿದ ಸಿಎಂ

ನಿರಂಜನಯ್ಯ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿರಂಜನಯ್ಯ ಅವರಿಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇರ್ತೀವಿ ಎಂದು ಧೈರ್ಯ ತುಂಬಿದ್ದಾರೆ. ಬಹುಬೇಗ ನೇಹಾ ಅವರ ಸಾವಿಗೆ ನ್ಯಾಯ ಸಿಗುತ್ತದೆ. ಬರ್ಬರ ಹತ್ಯೆ ಸಂಬಂಧ ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು. ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ. ನಾವು ಸಾಂತ್ವನ ಹೇಳಲು ಬಂದಿದ್ದೇವೆ. ನಮ್ಮ ಕರ್ತವ್ಯ ನಿಭಾಯಿಸಿ ನಾವು ಅವರ ಮನೆಗೆ ಬಂದಿದ್ದೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News