ನನ್ನ ಮಗಳ ಹತ್ಯೆ ಪ್ರಕರಣದ ತನಿಖೆ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ: ನೇಹಾಳ ತಂದೆ ಆರೋಪ

Update: 2024-04-20 09:39 GMT

ಹುಬ್ಬಳ್ಳಿ, ಎ.20: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ, ನೇಹಾಳ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು, ಇಂದು ನನ್ನ ಬೆನ್ನಿಗೆ ನಿಂತಿಲ್ಲ. ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದಲ್ಲಿ ಇದ್ದವರೇ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಮೂಲಕ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ನೇಹಾ ಹತ್ಯೆಯಲ್ಲಿ ಫಯಾಝ್ ಒಬ್ಬನೇ ಇಲ್ಲ, ಈತನ ಹಿಂದೆ ನಾಲ್ಕು ಜನರಿದ್ದಾರೆ. ಅವರ ಹೆಸರನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಈ ಕುರಿತು ತನಿಖೆ ಆಗಬೇಕು ಎಂದು ನಿರಂಜನಯ್ಯ ಹಿರೇಮಠ ಒತ್ತಾಯಿಸಿದರು.

ಇನ್ಟಾಗ್ರಾಂನಲ್ಲಿ ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ನನ್ನ ಅವಳ ಬಗ್ಗೆ ಸಮಾಜದಲ್ಲಿ ತಪ್ಪು ತಿಳುವಳಿಕೆ ಬರುವಂತೆ ಮಾಡಿದ್ದಾರೆ. ಆರೋಪಿ ಜೈಲಿನಲ್ಲಿದ್ದರು ಖಾತೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತನಿಖೆ ನಡೆಸಬೇಕು. ಈ ಕುರಿತು ವಕೀಲರೊಂದಿಗೆ ಮಾತನಾಡಿದ್ದೇನೆ. ಸೈಬರ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಿದ್ದೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News