ಹುಬ್ಬಳ್ಳಿ ಬಾಲಕಿಯನ್ನು ಹತ್ಯೆಗೈದ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು
Update: 2025-04-16 22:40 IST

ಆರೋಪಿ ರಿತೇಶಕುಮಾರ (35)
ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟ ಆರೋಪಿ ರಿತೇಶಕುಮಾರ (35) ಪೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.
ಹುಬ್ಬಳ್ಳಿಯ ಕೆಎಂಸಿಆರ್ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಮೃತದೇಹವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಪೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.
ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.