ಕೇಂದ್ರದ ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ : ಪ್ರಲ್ಹಾದ್ ಜೋಶಿ

Update: 2024-10-11 07:14 GMT

PC: fb.com

 ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಠಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ ಎಂದು ಹೇಳಿದರು.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 35 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ ಎಂದರು.

ದೇಶಾದ್ಯಂತ 18000 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಿಸುವ ಯೋಜನೆ ಇದಾಗಿದ್ದು, ಕಡುಬಡವರನ್ನು ರಕ್ತಹೀನತೆಯಿಂದ ಕಾಪಾಡಲು ಪ್ರಯೋಜನವಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ರಾಜ್ಯ ಸರ್ಕಾರದ್ದು ಯಾವ ಭಾಗ್ಯವೂ ಇಲ್ಲ: ರಾಜ್ಯ ಸರ್ಕಾರದ ಅನ್ನ ಭಾಗ್ಯ ಘೋಷಣೆ  ಮಾತ್ರ. ಯಾವ ಭಾಗ್ಯವೂ ಇಲ್ಲ! ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಟೀಕಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News