ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಸಚಿವ ನಾಗೇಂದ್ರ ಬಂಧಿಸಿ, ಪ್ರಕರಣವನ್ನು ಸಿಬಿಐಗೆ ವಹಿಸಿ : ಪ್ರಹ್ಲಾದ್‌ ಜೋಶಿ

Update: 2024-06-01 10:50 GMT

Photo : PTI

ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಸಂಬಂಧ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼಇದೊಂದು ಬಹುದೊಡ್ಡ ಭ್ರಷ್ಟಾಚಾರ ಹಗರಣವಾಗಿದ್ದು, ಇದರ ತನಿಖೆ ಸಿಬಿಐಗೆ ವಹಿಸಬೇಕು. ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು.

ನಿರ್ಲಜ್ಜೆಯ ಸರ್ಕಾರ: ರಾಜ್ಯ ಕಾಂಗ್ರೆಸ್ ಸರ್ಕಾರ ತೀರಾ ನಿರ್ಲಜ್ಜೆಯ ಸರ್ಕಾರವಾಗಿದೆ. ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂ. ಭ್ರಷ್ಟಾಚಾರ ಹಗರಣ ಬಯಲಿಗೆ ಬಂದರೂ ಇದೂವರೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ ಎಂದು ಜೋಶಿ ಖಂಡಿಸಿದರು.

ಚುನಾವಣೆಗೆ ಬಳಸಲೆಂದೇ ಹಣ ಲೂಟಿ: ಚುನಾವಣೆಗೆ ಬಳಸಲೆಂದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ಲೂಟಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಸರ್ಕಾರಿ ದುಡ್ಡು ಲಪಟಾಯಿಸಿ ಚುನಾವಣೆ ನಡೆಸಲು ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News