ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ, ಕಾನೂನು ರೀತಿ ಅತ್ಯುಗ್ರ ಶಿಕ್ಷೆಯಾಗಲಿ : ಪ್ರಹ್ಲಾದ್‌ ಜೋಶಿ

Update: 2024-06-01 07:36 GMT

ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಅಲ್ಲದೆ, ಪೆನ್‌ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ, ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, "ಪ್ರಜ್ವಲ್ ರೇವಣ್ಣ ಯಾವ ಕಾರಣಕ್ಕಾಗಿ ರಾಜ್ಯದ ಜನರ ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ. ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ ದೇಶದಲ್ಲಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹೇಸಿಗೆ ತರಿಸುವ ಕೆಲಸ" ಎಂದು ಜೋಶಿ ತೀವ್ರವಾಗಿ ಖಂಡಿಸಿದರು.

ʼಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಇದುವರೆಗೆ ನಡೆದುಕೊಂಡ ರೀತಿ ಅಕ್ಷಮ್ಯ. ಸಂತ್ರಸ್ತರ ಕ್ಷಮೆ ಕೇಳುತ್ತಾರೋ, ಬಿಡುತ್ತಾರೋ ಆದರೆ, ಇದೊಂದು ಘನಘೋರ ಕೃತ್ಯವಾಗಿದ್ದರಿಂದ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲೇಬೇಕು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆʼ ಎಂದು ಜೋಶಿ ಹೇಳಿದರು.

ʼಭಾರತೀಯ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದೆ. ತ್ವರಿತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಆರೋಪಿಗೆ ಶೀಘ್ರವೇ ಅತ್ಯುಗ್ರ ಶಿಕ್ಷೆ ವಿಧಿಸಬೇಕುʼ ಎಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News