ಬಿಸಿಲಿನ ತಾಪಮಾನ ಹೆಚ್ಚಳ : ವಿಜಯಪುರ, ಕಲಬುರಗಿ ಸೇರಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ
Update: 2025-04-04 19:11 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‍ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.