ಮುಡಾ ಕುರಿತು ಈಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

Update: 2025-01-20 14:57 IST
ಮುಡಾ ಕುರಿತು ಈಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ
  • whatsapp icon

ಬೆಂಗಳೂರು, ಜನವರಿ 20 : ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಡಾ ಹಗರಣದ ಬಗ್ಗೆ ಈಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಈಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಈಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದರು.

ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News