ಮಹಾರಾಷ್ಟ್ರ | ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ; ಗಂಭೀರ ಗಾಯ

Update: 2024-11-18 16:54 GMT

 ಅನಿಲ್ ದೇಶಮುಖ್ | PC : @LokmatTimes_ngp/X

ನಾಗ್ಪುರ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್ ಅವರ ಕಾರಿನ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಗಂಭೀರವಾಗಿ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ನಾಗ್ಪುರ ಜಿಲ್ಲೆಯ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಟೋಲ್ ಬಳಿಯ ಜಲಖೇಡ ರಸ್ತೆಯ ಬೆಲ್ಫಟಾ ಬಳಿ ಕೆಲವು ಅಪರಿಚಿತರು ದೇಶಮುಖ ಅವರ ಕಾರಿಗೆ ಕಲ್ಲು ಎಸೆದಿದ್ದಾರೆ. ದಾಳಿಯ ವೇಳೆ ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಕಟೋಲ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೊದ್ದಾರ್ ಘಟನೆಯನ್ನು ಖಚಿತಪಡಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಈ ಘಟನೆ ಸಂಭವಿಸಿದೆ.

ದೇಶಮುಖ್ ಅವರ ಪುತ್ರ ಸಲೀಲ್ ದೇಶಮುಖ್ ಅವರು ಬಿಜೆಪಿಯ ಚರಣಸಿಂಗ್ ಠಾಕೂರ್ ವಿರುದ್ಧ ಎನ್‌ಸಿಪಿ (ಶರದ್ಚಂದ್ರ ಪವಾರ್) ಪಕ್ಷದಿಂದ ಕಟೋಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News