ಕಾಂಗ್ರೆಸ್‌ ಸರಕಾರದಿಂದ ರಾಜಕೀಯ ಲಾಭಕ್ಕಾಗಿ ʼಗ್ಯಾರೆಂಟಿʼ ಜಾರಿ : ಬಸವರಾಜ ಬೊಮ್ಮಾಯಿ

Update: 2025-02-21 15:16 IST
ಕಾಂಗ್ರೆಸ್‌ ಸರಕಾರದಿಂದ ರಾಜಕೀಯ ಲಾಭಕ್ಕಾಗಿ ʼಗ್ಯಾರೆಂಟಿʼ ಜಾರಿ : ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

  • whatsapp icon

ಗದಗ : ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಗ್ಯಾರಂಟಿʼ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ. ಗೃಹ ಲಕ್ಷ್ಮಿ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೇ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ‌ ಎಂದು ದೂರಿದರು.

ರಾಜ್ಯದಲ್ಲಿ ಹಣ ಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ‌, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ. ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರಕಾರ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ‌ ರೂಪದಲ್ಲಿ ಮರಳಿ ಕೊಡಲು ಮುಂದಾಗಿದೆ. ಆದರೆ, ಅದರಲ್ಲೂ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಇವರಿಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ, ಹೀಗಾಗಿ ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಉದಯಗಿರಿ ಗಲಾಟೆ, ಆತಂಕರಿಗೆ ಗಲಭೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶ ಕೊಟ್ಟಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ಇದೆ. 1980 ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತ್ರ ಒಪ್ಪಿಕೊಳ್ಳಲಾಗಿದೆ. ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗುತ್ತಿದೆ. ಕೆಲವು ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು, ಸರಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ಹಳೆಯ ವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡುತ್ತಾರೆ. ಆದರೆ ಅಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಸಂಶೋಧನೆ ಆಗುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅವು ಭ್ರಷ್ಟಾಚಾರದ ಕೂಪಗಳಾಗಿವೆ. ಅದನ್ನು ಸರಿ ಪಡೆಸುವುದನ್ನು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News