ಗದಗ | ಲಾರಿ-ಕಾರು ನಡುವೆ ಭೀಕರ ರಸ್ತೆ ಅಪಘಾತ : ದಂಪತಿ ಮೃತ್ಯು, ಮಕ್ಕಳಿಬ್ಬರಿಗೆ ಗಾಯ

Update: 2024-11-06 08:32 GMT
Photo of car accident

ಭೀಕರ ರಸ್ತೆ ಅಪಘಾತ

  • whatsapp icon

ಗದಗ : ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಅಪಘಾತದಲ್ಲಿ ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮೃತ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಈ ರಸ್ತೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News