ಗದಗ: ರಸ್ತೆ ಅಪಘಾತಕ್ಕೆ ಗಜೇಂದ್ರಗಡ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಲಿ

Update: 2024-09-06 10:48 GMT

ಗದಗ: ಕಾಂಕ್ರಿಟ್ ಮಿಕ್ಸರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ಶುಕ್ರವಾರ ಸಂಭವಿಸಿದೆ.

ಗಜೇಂದ್ರಗಡ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಮೇಶ ಡಂಬಳ (43) ಮೃತಪಟ್ಟವರು.

ಚೌತಿ ಹಬ್ಬದ ಹಿನ್ನೆಲೆಯಲ್ಲಿ ರಮೇಶ ಡಂಬಳ ಅವರು ತನ್ನ ದ್ವಿಚಕ್ರ ವಾಹನದಲ್ಲಿ ನಗರದ ಮಾರ್ಕೆಟ್ ನಿಂದ ಹಣ್ಣು ಕಾಯಿ ಖರೀದಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಭೂಮರಡ್ಡಿ ವೃತ್ತದ ಬಳಿ ರಮೇಶ್ ಅವರ ದ್ವಿಚಕ್ರ ವಾಹನಕ್ಕೆ ಕಾಂಕ್ರಿಟ್ ಮಿಕ್ಸರ್ ಲಾರಿ ಢಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ರಮೇಶ್ ಅವರ ಮೇಲೆಯೇ ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗದಗ ಸಂಚಾರ ಪೊಲೀಸ್ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News