ಗದಗ: ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಸಾಗಾಟ; ಇಬ್ಬರ ಬಂಧನ
Update: 2025-03-21 14:41 IST

ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬೆಟಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗದಗ: ಬೆಟಗೇರಿ ಪೊಲೀಸ್ ಠಾಣೆಯ ಪೋಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ, ಇಬ್ಬರನ್ನು ಬಂಧಿಸಿ 1 ಲಕ್ಷ 12 ಸಾವಿರ ಮೌಲ್ಯದ 313 ಕೆಜಿ ಹಾಲಿನ ಪುಡಿಯನ್ನು ವಶಕ್ಕೆ ಪಡೆಯಲಾಗಿದೆ.
ಸಂತೋಷ ಶಿಂಧೆ ಮತ್ತು ಖಾಜಾ ಹುಸೇನ್ ಬಂಧಿತ ಆರೋಪಿಗಳು. ಇವರಿಂದ ಹಾಲಿನ ಪುಡಿ ಹಾಗೂ ಮಿನಿ ಲಾರಿ ವಶಪಡಿಸಿಕೊಂಡು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಮಕ್ಕಳು ಮತ್ತು ವಿದ್ಯಾರ್ಥಿಗಳ ಪೋಷಕ ಆಹಾರವಾಗಿ ಬಳಕೆಯಾಗಬೇಕಿದ್ದರೆ, ಅದನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.