ಗದಗ | ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರು ಮೃತ್ಯು
Update: 2024-05-19 10:05 IST

ಗದಗ, ಮೇ 19: ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ವೇಳೆ ಚಕ್ರದಡಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಜರುಗಿದೆ.
ಮೃತರನ್ನು ರೋಣದ ಕೆವಿಜಿ ಬ್ಯಾಂಕಿನಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ಮಲ್ಲನಗೌಡ ಲಿಂಗನಗೌಡರ (52) ಹಾಗೂ ಇನ್ನೋರ್ವ ಮೃತಪಟ್ಟಿದ್ದು, ಅವರ ಹೆಸರು, ವಿಳಾಸ ಪತ್ತೆ ಆಗಿಲ್ಲ.
ಪಟ್ಟಣದ ರಾಜ ಬೀದಿಯಲ್ಲಿ ರಥ ಸಾಗುತ್ತಿದ್ದಂತೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಏಕಾಏಕಿ ಚಕ್ರದಡಿಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.