ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲ ಗೆಹ್ಲೋಟ್

Update: 2024-03-06 15:11 GMT

ಗದಗ: ಗ್ರಾಮೀಣ ಅಭಿವೃದ್ಧಿಗಾಗಿ ಗ್ರಾಮಮಟ್ಟದಲ್ಲಿ ಉತ್ತಮ ಶಿಕ್ಷಣ, ಕೃಷಿ ಸುಧಾರಣೆ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ವಿಶ್ವ ವಿದ್ಯಾನಿಲಯದ 4ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಹಳ್ಳಿಗಳನ್ನು ಸ್ವಾವಲಂಬಿಯಾಗಿ ಮಾಡದಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದು ಸಾರ್ವತ್ರಿಕವಾಗಿ ಒಪ್ಪಿಕೊಂಡ ಸತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಪಂಚಾಯತ್ ರಾಜ್ ವ್ಯವಸ್ಥೆಯು ಬಹಳ ಪ್ರಾಚೀನ ಕಲ್ಪನೆಯಾಗಿದೆ. ನಮ್ಮ ಆಡಳಿತ ವ್ಯವಸ್ಥೆಯಲ್ಲಿ, ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಜೊತೆಗೆ ಸ್ಥಳೀಯ ಆಡಳಿತದ ಘಟಕವಾಗಿ ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಂಡಿದ್ದೇವೆ. ಸಾಂವಿಧಾನಿಕ ತಿದ್ದುಪಡಿಯ ಮೂಲಕ, ಪಂಚಾಯತ್‍ರಾಜ್ ವ್ಯವಸ್ಥೆಗೆ ಸಮಗ್ರ ಅಧಿಕಾರ ನೀಡುವ ಮೂಲಕ ಈ ವ್ಯವಸ್ಥೆಯನ್ನು ಬಲಪಡಿಸಲು ಕೆಲಸ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಕೇಂದ್ರ ಪಂಚಾಯತ್‍ರಾಜ್ ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಟಿ.ಆರ್.ರಘುನಂದನ್, ಕುಲಪತಿ ವಿಷ್ಣುಕಾಂತ್ ಎಸ್.ಚಟಪಲ್ಲಿ ಮತ್ತಿತರರು ಹಾಜರಿದ್ದರು.

‘ಜನರ ಹಿತ ಮತ್ತು ದೇಶದ ಹಿತಕ್ಕಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು. ಗ್ರಾಮೀಣ ಪ್ರದೇಶದ ಯಾವ ವ್ಯಕ್ತಿಯು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣದ ಜೊತೆಗೆ ಉದ್ಯೋಗ ಕಲ್ಪಿಸುವಂತ ವ್ಯವಸ್ಥೆಯನ್ನು ರೂಪಿಸಬೇಕು. ಹಿಂದೆ ಬಡವರ ಕಲ್ಯಾಣಕ್ಕಾಗಿ ಅಂತ್ಯೋದಯ ಕಾರ್ಯಕ್ರಮವಿತ್ತು. ಈ ರೀತಿಯ ಕಾರ್ಯಕ್ರಮಗಳು ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿವೆ’

ಥಾವರ್ ಚಂದ್ ಗೆಹ್ಲೋಟ್, ರಾಜ್ಯಪಾಲ

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News