ಪ್ರಧಾನಿ ಮೋದಿ ವಿರುದ್ದ ಮಾತನಾಡಲು ಸಿಎಂಗೆ ಏನೂ ಇಲ್ಲದ್ದಕ್ಕೆ ಸಂವಿಧಾನ ಬದಲಾವಣೆಯ ಭಯ ಹುಟ್ಟಿಸುತ್ತಾರೆ : ಬೊಮ್ಮಾಯಿ

Update: 2024-04-13 11:19 GMT

ಹಾವೇರಿ : ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ನವರಿಗೆ ಮಾತನಾಡಲು ಏನೂ ಇಲ್ಲದ ಕಾರಣ ಸಂವಿಧಾನ ಬದಲಾಯಿಸುತ್ತಾರೆ ಎಂದು ರಾಜಕೀಯವಾಗಿ ಭಯ ಹುಟ್ಟಿಸಲು ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸವಣೂರಿನಲ್ಲಿ ಚುನಾವಣಾ ಪ್ರಚಾರಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ದ ಹೇಳಲು ಏನೂ ಇಲ್ಲ. ಕಳೆದ ಬಾರಿ ಇದನ್ನೆ ಹೇಳಿದ್ದರು. ಸಂವಿಧಾನ ಬದಲು ಮಾಡಲು ಯಾರ ಕೈಯಲ್ಲೂ ಆಗುವುದಿಲ್ಲ. ಎಲ್ಲದಕ್ಕೂ ಕಾನೂನು ಅಂತ ಇದೆ. ಸಂವಿಧಾನ ಬದಲು ಮಾಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಭಯ ಹುಟ್ಟಿಸಲು ಈ ರೀತಿ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ 400 ಸೀಟು ಗೆಲ್ಲುವುದಿಲ್ಲ, ಅದಿಕಾರಕ್ಕೆ ಬರುವುದಿಲ್ಲ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್  ಎಲೆಯೊಳಗೆ ಕಲ್ಲು ಬಿದ್ದಿದೆ. ಅವರು ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ. ನಾವು 370 ಸೀಟು ದಾಟುತ್ತೆವೆ  ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News