2 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿರುವ ಅಬುಧಾಬಿಯ ಯುವರಾಜ

Update: 2024-09-07 16:39 GMT

ಪ್ರಧಾನಿ ನರೇಂದ್ರ ಮೋದಿ ಮತ್ತು ಅಬುಧಾಬಿಯ ಯುವರಾಜ ಶೇಖ್‌ ಖಾಲೇದ್ ಬಿನ್‌ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ | PC :PTI

ಹೊಸದಿಲ್ಲಿ : ಅಬುಧಾಬಿಯ ಯುವರಾಜ ಶೇಖ್‌ ಖಾಲೇದ್ ಬಿನ್‌ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

2 ದಿನಗಳ ಪ್ರವಾಸ ರವಿವಾರದಿಂದ ಆರಂಭವಾಗಲಿದ್ದು, ಯುಎಇ ಸರ್ಕಾರದ ಹಲವು ಸಚಿವರು ಹಾಗೂ ವಾಣಿಜ್ಯ ಪ್ರತಿನಿಧಿಗಳ ನಿಯೋಗ ಅಬುಧಾಬಿಯ ಯುವರಾಜನೊಂದಿಗೆ ಇರಲಿದೆ.

ಈ ಭೇಟಿಯು ಸಂಯುಕ್ತ ಅರಬ್ ಸಂಸ್ಥಾನ (ಯುಎಇ) ಮತ್ತು ಭಾರತದ ನಡುವಿನ ಬಾಂಧವ್ಯ ಮತ್ತಷ್ಟು ಬಲಪಡಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆಯ ಮಧ್ಯೆ ಅಬುಧಾಬಿಯ ಯುವರಾಜ, ಪ್ರಧಾನಿ ಮೋದಿ ಜೊತೆ ಮಹತ್ವದ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ. ಉಭಯ ನಾಯಕರು ಇಸ್ರೇಲ್-ಹಮಾಸ್ ಸಂಘರ್ಷದ ಪರಿಸ್ಥಿತಿ ಬಗ್ಗೆಯೂ ಚರ್ಚಿಸುವ ನಿರೀಕ್ಷೆಯಿದೆ.

ಶೇಖ್‌ ಖಾಲೇದ್ ಬಿನ್‌ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ. ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News