ಬಹರೈನ್: ಕನ್ನಡ ಸಂಘದ ವತಿಯಿಂದ ಸ್ಪೀಕರ್ ಯು.ಟಿ.ಖಾದರ್ ಗೆ ಸನ್ಮಾನ

Update: 2023-12-23 05:20 GMT

ಬಹರೈನ್: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮವು ಇಲ್ಲಿನ ಕನ್ನಡ ಸಂಘದ ವತಿಯಿಂದ ನಡೆಯಿತು.

ಶುಕ್ರವಾರ ಇಲ್ಲಿನ ಕನ್ನಡ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕನ್ನಡ ಸಂಘದ ಅಧ್ಯಕ್ಷ ಅಮರನಾಥ್ ರೈ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಯು.ಟಿ ಖಾದರ್, ಬಹರೈನ್ ಕನ್ನಡಿಗರ ಕನ್ನಡ ಪರ ಕಾರ್ಯ ಚಟುವಟಿಕೆಗಳನ್ನು ಪ್ರಶಂಸಿಸಿ ಅಭಿನಂದಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಬಿಸಿಎಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿರುವ ಹಿರಿಯ ಉದ್ಯಮಿ ಮುಹಮ್ಮದ್ ಮನ್ಸೂರ್, ಸೌದಿ ಅರೇಬಿಯಾದ ಹಿರಿಯ ಉದ್ಯಮಿ ಶೇಖ್ ಕರ್ನಿರೆ ಔಪಚಾರಿಕವಾಗಿ ಮಾತನಾಡಿದರು.

ಸಂಘದ ಅಧ್ಯಕ್ಷ ಅಮರನಾಥ್ ರೈಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಇದೇ ಸಂದರ್ಭದಲ್ಲಿ ದ್ವೀಪ ಹಾಗೂ ಸೌದಿ ಅರೇಬಿಯದಲ್ಲಿ ಸಕ್ರಿಯವಾಗಿರುವ ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಸ್ಮರಣಿಕೆ ನೀಡಿ ಗೌರವಿಸಿದರು.

ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಉಪಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು.









 


 


 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News