ದುಬೈ: ಫೆ.9ರಂದು ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಅದ್ದೂರಿಯ ಬ್ಯಾರಿ ಮೇಳ

Update: 2024-12-09 12:07 GMT

ದುಬೈ: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆ.9ರಂದು ಅದ್ದೂರಿಯ ಬ್ಯಾರಿ ಮೇಳವು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ನಡೆಯಲಿದೆ.

ಡಿ.8ರಂದು ಅಜ್ಮಾನ್ ತುಂಬೆ ಮೆಡಿಸಿಟಿ ಸಭಾಂಗಣದಲ್ಲಿ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಗ್ರೂಪ್ ಸ್ಥಾಪಕರು, ಅನಿವಾಸಿ ಉದ್ಯಮಿ ತುಂಬೆ ಮೊಹಿದ್ದೀನ್ ಅವರು ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮದ ಸಿದ್ಧತೆಗೆ ಅಧಿಕೃತ ಚಾಲನೆ ನೀಡಿದರು.


ಬ್ಯಾರೀಸ್ ಚೇಂಬರ್ ಯುಎಇ ಅಧ್ಯಕ್ಷ ಹಿದಾಯತ್ ಅಡ್ಡೂರ್ ಬ್ಯಾರಿ ಸಮುದಾಯದ ಉದ್ಯಮ ಕ್ಷೇತ್ರದ ಇತಿಹಾಸದ ಬಗ್ಗೆ ಮಾತನಾಡಿ, ಬ್ಯಾರೀಸ್ ಚೇಂಬರ್ ನ ಗುರಿ ಹಾಗೂ ಬ್ಯಾರಿ ಮೇಳದ ಉದ್ದೇಶದ ಬಗ್ಗೆ ಮಾತನಾಡಿದರು.


ಬ್ಯಾರಿ ಮೇಳದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ, ಭಾಗವಹಿಸುವ ಅತಿಥಿಗಳ ಬಗ್ಗೆ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಹಂಝ ಅಬ್ದುಲ್ ಖಾದರ್, ಮಹಮ್ಮದ್ ಅಲಿ ಉಚ್ಚಿಲ್, ಇಮ್ರಾನ್ ಎರ್ಮಾಳ್ ವಿವರಿಸಿದರು. ಅಂದು ನಡೆಯಲಿರುವ ಉದ್ಯೋಗ ಮೇಳ, ದೊರಕಲಿರುವ ಹಲವಾರು ಉದ್ಯೋಗಾವಕಾಶಗಳ ಬಗ್ಗೆ ಮಹಮ್ಮದ್ ಮುಸ್ತಾಕ್ ಮಾಹಿತಿ ನೀಡಿದರು.


ಬ್ಯಾರಿ ಮೇಳದಲ್ಲಿ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮ, ಯಶಸ್ವಿ ಉದ್ಯಮಿಗಳನ್ನು, ಸಮುದಾಯದ ಸಾಧಕರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು, ಕರಾವಳಿಯ ಪ್ರಸಿದ್ಧ ಆಹಾರ, ತಿಂಡಿಗಳ ಮಳಿಗೆಗಳು, ವಿವಿಧ ಉದ್ಯಮ ಕ್ಷೇತ್ರದ 60ಕ್ಕೂ ಹೆಚ್ಚಿನ ಮಳಿಗೆಗಳು ಇರಲಿವೆ.


ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಯುಎಇಯ ಪ್ರಮುಖ ಬ್ಯಾರಿ ಸಂಘಟನೆಗಳಾದ ಬಿ.ಸಿ.ಎಫ್, ಬಿ.ಡಬ್ಲ್ಯೂ.ಎಫ್, ಕೆ.ಸಿ.ಎಫ್, ಕೆ.ಐ.ಸಿ, ದಾರುಲ್ ಇರ್ಷಾದ್, ಡಿ.ಕೆ.ಎಸ್.ಸಿ, ಕೆ.ಎಂ.ಎ.ಎಸ್, ಹಿದಾಯ ಫೌಂಡೇಶನ್, ಕೆ.ಡಿ.ಸಿ, ಅಲ್ ಖಮರ್, ಎಸ್.ಯು.ಎ.ಸಿ, ಪ್ರವಾಸಿ ಕೂಟ ವಿಟ್ಲ, ಟಿ.ಓ.ಡಿ, ಕೆ.ಎ.ಎಫ್, ಕೆ.ಎಂ.ಎ.ಜೆ, ಎಂ.ಎಫ್.ಡಿ, ಎಸ್.ಕೆ.ಎಸ್.ಎಸ್.ಎಫ್ ಯುಎಇ, ದಾರುನ್ನೂರು, ದಾರುಸ್ಸಲಾಂ, ಶಂಶುಲ್ ಉಲಾಮ ಸೆಂಟರ್, ದಾರುಲ್ ಹಸನಿಯ್ಯ ಎಜುಕೇಷನ್ ಸೆಂಟರ್, ಅಲ್ ಇಸ್ಲಾಮೀಯ ವೆಲ್ಫೇರ್, ಮೂಳೂರು ವೆಲ್ಫೇರ್, ಅಲ್ ಹುದಾ, ಅಲ್ ಇಬಾದ್ ಇಂಡಿಯನ್ ಸ್ಕೂಲ್, ನೂರ್ ಫ್ರೆಂಡ್ಸ್, ಸಾದಿಯ ಬೆಂಗಳೂರು, ಕೊಡಗು ವೆಲ್ಫೇರ್, ಮಸ್ದರ್ ಕೊಪ್ಪಳ, ಅಲ್ ಮದೀನಾ ಮಂಜನಾಡಿ, ಮುಹಿನ್ನುಸುನ್ನ ದಾವಣಗೆರೆ, ಮರ್ಕಝ್ ಉಲ್ ಹುದಾ ಕುಂಬ್ರ, ದಾರುಲ್ ಹಿದಾ ಬೆಳ್ಳಾರೆ ಹಾಗೂ ಹಲವು ಮುಖಂಡರು, ಉದ್ಯಮಿಗಳು ಭಾಗವಹಿಸಿದ್ದರು.


ಬ್ಯಾರಿ ಮೇಳ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಂತೂರ್ ಧನ್ಯವಾದ ಅರ್ಪಿಸಿದರು. ಬ್ಯಾರೀಸ್ ಚೇಂಬರ್ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್ ಕಾರ್ಯಕ್ರಮ ನಿರೂಪಿಸಿದರು.





































Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News