ಯುಎಇ: ಅಬುಧಾಬಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ

Update: 2023-08-03 13:59 GMT

ಸಾಂದರ್ಭಿಕ ಚಿತ್ರ 

ಯುಎಇ: ಅಬುಧಾಬಿಯ ಮುಸಾಫ್ಹಾದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಕಟ್ಟಡದಲ್ಲಿದ್ದ ಜನರನ್ನು ತೆರವುಗೊಳಿಸಿದ್ದಾರೆ.

ಅಬುಧಾಬಿ ಪೊಲೀಸರು ಮತ್ತು ಸಿವಿಲ್ ಡಿಫೆನ್ಸ್ ಅಥಾರಿಟಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು khaleejtimes.com ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ವದಂತಿಗಳನ್ನು ಹರಡದಂತೆ ಮನವಿ ಮಾಡಿದ್ದು, ಅಧಿಕೃತ ಮೂಲಗಳಿಂದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News