ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

Update: 2024-07-01 17:43 GMT

PC: X/@DrSJaishankar (ಎಸ್. ಜೈಶಂಕರ್  ,  ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿ)


ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್' ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News