ಸಕಲೇಶಪುರ | 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಸಕಲೇಶಪುರ: 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹೆತ್ತೂರಿನಲ್ಲಿ ನೆಡೆಯುತ್ತಿದ್ದು, ಇದರ ಲಾಂಛನವನ್ನು ಇಂದು ಹೆತ್ತೂರಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಅವರು," ಹೆತ್ತೂರಿನಲ್ಲಿ ಯಾವುದೇ ಕಾರ್ಯಕ್ರಮವನ್ನು ಮಾಡಿದರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಹಬ್ಬದ ರೀತಿ ಆಚರಿಸುತ್ತಾರೆ. ನಮ್ಮ ತಾಲೂಕಿನಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸುತ್ತಿರುವುದು ಖುಷಿಯ ವಿಚಾರ. ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. " ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಮಲ್ಲೇಶ್ ಗೌಡ, " ಹೆತ್ತೂರಿನಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸೋಣ. ಈ ಬಾರಿಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಿದ ಶಾಸಕರಿಗೆ ಶುಭಾಶಯಗಳು. " ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜ್ ಹಳ್ಳಿಬೈಲು , ತಾಲೂಕು ಕಸಾಪ ಅಧ್ಯಕ್ಷರಾದ ಶಾರದ ಗುರುಮೂರ್ತಿ, ಮದನ್ ಗೌಡ, ಜೆಡಿಎಸ್ ಮುಖಂಡರಾದ ಪುಟ್ಟಸ್ವಾಮಿ ಗೌಡ, ಹೆತ್ತೂರು ಹೋಬಳಿ ಬೆಳಗಾರರ ಸಂಘದ ಅಧ್ಯಕ್ಷರಾದ ದೇವರಾಜ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೇತ್ರ ಸುರೇಶ್ , ಜಿಲ್ಲಾ ಕಾಸಪ ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ , ರತನ್, ಹೆತ್ತೂರು ಹೋಬಳಿ ಕಸಾಪ ಅಧ್ಯಕ್ಷರಾದ ರವಿಕುಮಾರ್, ಉಪ ತಹಸಿಲ್ದಾರ್ ಗಂಗಾಧರ್,ಸೇರಿದಂತೆ ಹೋಬಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.