ಅರಸೀಕರೆ | ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಅರಸೀಕೆರೆ, ಎ.9: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಕಾರಣ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಕೆ.ಪಿ.ಮನೋಜ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಇಲ್ಲಿನ ಖಾಸಗಿ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದ ಮನೋಜ್ 79 ಶೇಕಡ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದರು. ಎಸೆಸೆಲ್ಸಿಯಲ್ಲಿ 98 ಶೇ. ಅಂಕಗಳನ್ನು ಗಳಿಸಿದ್ದ ಮನೋಜ್ ಪಿಯುಸಿಯಲ್ಲಿ ನಿರೀಕ್ಷಿತ ಅಂಕ ಗಳಿಸಲು ಸಾಧ್ಯವಾಗದಿರುವುದರಿಂದ ಹತಾಶೆಗೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮತ್ತಷ್ಟು ತನಿಖೆ ನಡೆಯುತ್ತಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.