ಬೇಲೂರು | ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ದಂಪತಿ ಪ್ರಾಣಾಪಾಯದಿಂದ ಪಾರು
Update: 2025-01-10 16:21 GMT
ಬೇಲೂರು: ತಾಲ್ಲೂಕಿನ ಕಡೆಗರ್ಜೆ ಗ್ರಾಮದ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟುಹೋದ ಘಟನೆ ಇಂದು(ಶುಕ್ರವಾರ) ನಡೆದಿದೆ.
ಬೆಂಕಿ ಕೆಲವೇ ಕ್ಷಣಗಳಲ್ಲಿ ವಾಹನವನ್ನು ಸಂಪೂರ್ಣವಾಗಿ ವ್ಯಾಪಿಸಿಕೊಂಡರೂ ಅದೃಷ್ಟವಶಾತ್, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಪ್ರಯಾಣಿಸುತ್ತಿದ್ದ ಶೇಷಾದ್ರಿ ಮತ್ತು ಅವರ ಪತ್ನಿ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿದ್ದರು. ಅವರು ಕಾರಿನಿಂದ ಕೆಳಗಿಳಿದ ತಕ್ಷಣ, ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅರೇಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.