ಬೇಲೂರು | ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮ

Update: 2024-11-23 22:32 IST
Photo of Celebration
  • whatsapp icon

ಬೇಲೂರು: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನಲೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಜೆ ನಿಶಾಂತ್, ಮೂರು ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಜಯಗಳಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಏನು ಎಂಬುವುದನ್ನು ಸಾಬೀತುಪಡಿಸಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡಿ ಇವತ್ತು ಅವರೇ ಮೂಲೆಗುಂಪಾಗಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ಬಡವರ ಪಾಲಿನ ಬಂದು ಎಂದು ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿಸಿಕೊಟ್ಟಿದ್ದಾರೆ. ಮೂರು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಭದ್ರ ಬುನಾದಿ ಹಾಕಿಕೊಟ್ಟಿದೆ. ಗ್ಯಾರಂಟಿ ಯೋಜನೆಯ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗೆದ್ದು ಬೀಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಆರ್. ವೆಂಕಟೇಶ್, ಪುರಸಭೆ ಸದಸ್ಯರಾದ ಜಮಾಲ್, ಅಕ್ರಂ, ಅಶೋಕ್, ಮುಖಂಡರಾದ ಮಲ್ಲಿಕ್, ರವೀಶ್, ಗೋಪಿನಾಥ್, ಚಂದ್ರಶೇಖರ, ಕೆಡಿಪಿ ಸದಸ್ಯ ಸೌಮ್ಯ ಆನಂದ್, ಗಿರೀಶ್, ಸುಬ್ರಹಣ್ಯ,ಇತರರು ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News