ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: 7 ಮಂದಿಗೆ ಗಾಯ

Update: 2024-09-06 07:19 GMT

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ.

ಅಪಘಾತದಲ್ಲಿ ಪತ್ರಕರ್ತ ಹರೀಶ್, ಕಿರಣ್ ಸೇರಿದಂತೆ ಇತರ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆ ವತಿಯಿಂದ ಪತ್ರಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆದ ವಾಹನ ಲಾರಿಗೆ ಢಿಕ್ಕಿ ಹೊಡೆದಿದೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ವಾಹನ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ 7 ಜನ ಪತ್ರಕರ್ತರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.

ಇಲಾಖೆಯ ವಾಹನಗಳು ಹಳೆಯದಾಗಿದ್ದು,  ಮತ ವಾಹನಗಳನ್ನು ನೀಡುವಂತೆ ಸರ್ಕಾರ ಒತ್ತಾಯಿಸಿದರೂ ಪ್ರಯೋಜನವಾಗಿರಲಿಲ್ಲ. ಈ ವಾಹನವನ್ನೇ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News