ಅನಾರೋಗ್ಯದಿಂದ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ
Update: 2024-08-15 15:53 GMT
ಹಾಸನ : ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್.ಬಸವರಾಜು (75) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬಸವರಾಜು ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಗುರುವಾರ) ನಿಧರಾಗಿದ್ದಾರೆ.
2004-2007ರವರೆಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು.