ಹಾಸನ | ಹೊಯ್ಸಳ ಪೊಲೀಸ್ ವಾಹನ-ಬೈಕ್ ನಡುವೆ ಢಿಕ್ಕಿ: ಸವಾರ ಮೃತ್ಯು
Update: 2025-04-09 20:13 IST

ಹಾಸನ : ನಗರದ ಬಿ.ಎಂ.ರಸ್ತೆಯಲ್ಲಿ ಇಂದು(ಎ.9) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹೊಯ್ಸಳ ಪೊಲೀಸರ ತುರ್ತು ಸೇವಾ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಮೃತ ಯುವಕನನ್ನು ಶಶಾಂಕ್ (21) ಎಂದು ಗುರುತಿಸಲಾಗಿದೆ. ಮೃತ ಶಶಾಂಕ್ ಸರಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ವಿದ್ಯಾರ್ಥಿಯಾಗಿದ್ದ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶಶಾಂಕ್‌ನನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಸ್ಥಳಕ್ಕೆ ಹಾಸನ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.