ಹಾಸನ | ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರುಪಾಲು

Update: 2024-05-16 15:48 IST
ಹಾಸನ | ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರುಪಾಲು
ಸಾಂದರ್ಭಿಕ ಚಿತ್ರ
  • whatsapp icon

ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ಐವರ ಪೈಕಿ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಬಾಲಕರನ್ನು ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಎಂದು ಗುರುತಿಸಲಾಗಿದೆ. ಚಿರಾಗ್ (10) ಎಂಬಾತ ಬದುಕುಳಿದಿದ್ದು, ಆತನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.

ಶಾಲೆಗೆ ರಜೆ ಇರುವುದರಿಂದ ಈಜಲು ಹೋಗಿದ್ದ ಬಾಲಕರು ಒಬ್ಬರನ್ನೊಬ್ಬರು ರಕ್ಷಿಸುವ ಯತ್ನದಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮೃತದೇಹದ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News