ಹಾಸನ | ಮೂಕ ಬಾಲಕಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

Update: 2024-09-26 07:34 GMT

ಸಾಂದರ್ಭಿಕ ಚಿತ್ರ

ಹಾಸನ : ಕಿವುಡು ಮತ್ತು ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ವರದಿಯಾಗಿದ್ದು, ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ನಡೆದ ಒಂದು ತಿಂಗಳ ಬಳಿಕ ಅಪ್ರಾಪ್ತ ಬಾಲಕಿಯ ತಂದೆ ಹಾಸನ ನಗರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಸಂತ್ರಸ್ತ ಬಾಲಕಿಯು ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯೊಂದರ ಎರಡನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಒಂದು ತಿಂಗಳ ಹಿಂದೆ ಆರೋಪಿಯು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನ್ನ ಪೋಷಕರ ಬಳಿ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಿಕೊಳ್ಳಲಾಗದೆ, ಅಪ್ರಾಪ್ತ ಬಾಲಕಿ ಆರೋಗ್ಯ ಸಮಸ್ಯೆಯಿಂದ ಬಳಲಿದ್ದಳು. ಬಳಿಕ ವೈದ್ಯರ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News