ಹಾಸನ | ಪಿಕಪ್, ದ್ವಿಚಕ್ರ ವಾಹನದ ನಡುವೆ ಢಿಕ್ಕಿ : ಮೂವರು ಮೃತ್ಯು

Update: 2024-06-22 12:42 GMT

ಹಾಸನ : ಬೊಲೆರೋ ಪಿಕಪ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ  ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ನಡೆದಿದೆ.

ಅಪಘಾತದಲ್ಲಿ ಮೃತರಾದವರ ಗುರುತು ಪತ್ತೆಯಾಗಿಲ್ಲ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪಿಕಪ್, ರಸ್ತೆ ಬದಿಯ ರೈತರ ಜಮೀನಿಗೆ ನುಗ್ಗಿದೆ. ಸವಾರನೊಬ್ಬನ ಮೃತದೇಹ ಪಿಕಪ್ ಚಕ್ರಕ್ಕೆ ಸಿಲುಕಿ ಜರ್ಜರಿತವಾಗಿದೆ ಎಂದು ತಿಳಿದು ಬಂದಿದೆ.

ಶಾಂತಿಗ್ರಾಮ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News