ಹಾಸನ ಸಮಾವೇಶ | ರಾಜ್ಯ ಸರಕಾರದ ʼಗ್ಯಾರಂಟಿʼಗಳನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ : ಸುರ್ಜೆವಾಲ

Update: 2024-12-05 10:01 GMT

ಹಾಸನ : ಕೇಂದ್ರ ಸರಕಾರ ಬಂಡವಾಳ ಶಾಹಿಗಳ ತೆರಿಗೆಯನ್ನು ಶೇಕಡಾ 33 ರಿಂದ ಶೇ.22ಕ್ಕೆ ಇಳಿಸುವ ಮೂಲಕ ಕೋಟ್ಯಂತರ ರೂ. ಕೊಟ್ಟಿದೆ. ಆದರೆ, 58 ಸಾವಿರ ಕೋಟಿಯನ್ನು ನೇರವಾಗಿ ಬಡವರ ಖಾತೆಗೆ ಜಮೆ ಮಾಡುತ್ತಿರುವ ರಾಜ್ಯ ಸರಕಾರದ ಯೋಜನೆಯನ್ನು ಸಹಿಸಿಕೊಳ್ಳಲು ಬಿಜೆಪಿ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲ ಹೇಳಿದ್ದಾರೆ.

ಹಾಸನ ಕಾಂಗ್ರೆಸ್‌ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಉದ್ಯಮಿಗಳ 78 ಸಾವಿರ ಕೋಟಿ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡುತ್ತದೆ. ಆದರೆ, ಕಾಂಗ್ರೆಸ್‌ ಸರಕಾರ ಜನರ ಖಾತೆಗೆ 58 ಸಾವಿರ ಕೋಟಿ ಹಾಕುತ್ತಿದೆ. ಕಾಂಗ್ರೆಸ್‌ನ ಗ್ಯಾರಂಟಿಗಳ ಮೇಲೆ ದಾಳಿ ಮಾಡುವ ಮೂಲಕ ರಾಜ್ಯದ ಬಡವರು, ದುರ್ಬಲ ವರ್ಗದವರ ಶಕ್ತಿಯನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿರುವ ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳಿಗೆ ಬಲ ತುಂಬಿಸುವ ಉದ್ದೇಶದಿಂದ ಡಾ.ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದ್ದಾರೆ. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ, ಆದಿವಾಸಿಗಳು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರ ಜೀವನದ ಮೇಲೆ ದಾಳಿ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News