ಹಾಸನ: ರಾಹುಲ್ ಗಾಂಧಿ ಮೇಲೆ ದಾಳಿ ಯತ್ನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2024-01-23 18:20 GMT

ಹಾಸನ: ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದಲ್ಲದೇ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಎಂ. ರಸ್ತೆ ಮೂಲಕ ಡಿಸಿ ಕಛೇರಿ ಎದುರು ರಸ್ತೆ ಮಧ್ಯೆ ಕುಳಿತು ಕೆಲ ಸಮಯ ರಸ್ತೆ ತಡೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡರಾದ ಮುನಿಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ರವರ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ರವರು ಸಾಗುತ್ತಿದ್ದ ಬಸ್ಸನ್ನು ಅಡ್ಡಗಟ್ಟಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿದರು. ರಾಹುಲ್ ಗಾಂಧಿ ಅವರ ಮೇಲಿನ ದಾಳಿಯು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು, ದಾಳಿ ನಡೆಸಿದ ಬಿಜೆಪಿ ಗೂಂಡಾಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ತಕ್ಷಣ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಘು ದಾಸರಕೊಪ್ಪಲು, ಮಂಜುನಾಥ್ ಶರ್ಮ ರಂಜಿತ್ ಗೊರೂರು, ಅಬ್ದೂಲ್ ಖಯಿಂ, ಅಮ್ಜಾದ್, ಪ್ರವೀಣ್ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News