ಹಾಸನ| 146 ಜನ ಸಂಸದರ ಅಮಾನತು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Update: 2023-12-22 17:25 GMT

ಹಾಸನ: ಸಂಸತ್ ದಾಳಿ ಕುರಿತು ಲೋಕಾಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದ 146 ಜನ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಇ.ಎಚ್. ಲಕ್ಷ್ಮಣ್ ಮಾಧ್ಯಮದೊಂದಿಗೆ ಮಾತನಾಡಿ, ಸಂಸತ್ತಿನಲ್ಲಿ ಭದ್ರತಾ ವೈಫಲ್ಯದಿಂದ  ದುರ್ಘಟನೆ ಸಂಭವಿಸಿದ್ದು, ಈ ಘಟನೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ವಿಪಕ್ಷಗಳ ಸಂಸದರು ಪ್ರಶ್ನಿಸಿ ಸೂಕ್ತ ವಿವರಣೆ ನೀಡುವಂತೆ ಆಗ್ರಹಿಸಿದ್ದರಿಂದ ಸಹಿಲಾರದ ಆಡಳಿತಾರೂಡ ಕೇಂದ್ರ ಬಿಜೆಪಿ. ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸಿ ಲೋಕಸಭೆಯ 97 ಮತ್ತು ರಾಜ್ಯ ಸಭೆಯ 46 ಒಟ್ಟಾಗಿ 146 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರದ ಜನವಿರೋಧಿ ಮತ್ತು ಸಂವಿಧಾನ ವಿರೋಧಿ ಕ್ರಮವಾಗಿದ್ದು, ದೇಶದ ಇತಿಹಾಸದಲ್ಲಿ ಇದೊಂದು ಕರಾಳ ದಿನವಾಗಿದೆ. ಯಾವತ್ತೂ ನಡೆದಿಲ್ಲ ಹಾಗೂ ಭವಿಷ್ಯದಲ್ಲಿ ನಡೆಯದಂತಹಾ ಘಟನೆ ನಡೆದಿದೆ ಎಂದರು. 

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮುಖಂಡರಾದ ಬಾಗೂರು ಮಂಜೇಗೌಡ, ಬನವಾಸೆ ರಂಗಸ್ವಾಮಿ, ಎಚ್.ಕೆ. ಜವರೇಗೌಡ, ಪಟೇಲ್ ಶಿವಪ್ಪ, ಮಂಜುನಾಥ್ ಶರ್ಮ, ರಾಮಚಂದ್ರ, ಎಚ್.ಕೆ. ಪ್ರಕಾಶ್, ಶಂಕರರಾಜು, ರಘು ದಾಸರಕೊಪ್ಪಲು, ಹರೀಶ್, ವೆಂಕಟೇಗೌಡ, ಬೂದೇಶ್, ಚಂದ್ರಶೇಖರ್ , ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News