ಹಾಸನ | ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಮೃತ್ಯು, ಮತ್ತೋರ್ವ ಗಂಭೀರ

Update: 2024-06-21 18:01 GMT

ಹಾಸನ : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟು ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯ ಮರಿಯಾ ನಗರದ ಬಳಿ ನಡೆದಿದೆ.

ಮರಿಯಾ ನಗರದ ಗಣೇಶ್ (40) ಮೃತ ವ್ಯಕ್ತಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಬೈಕ್‌ ಸವಾರ ಸುರೇಶ್‌ ಎಂಬವರನ್ನು ಚಿಕಿತ್ಸೆಗಾಗಿ ಹಿಮ್ಸ್ ಗೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ಕೊಣನೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೊಳಗಾದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News