ಹಾಸನ | ಗಾಳಿಮಳೆಗೆ ನೆಲಕ್ಕೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು

Update: 2025-04-20 14:59 IST
ಹಾಸನ | ಗಾಳಿಮಳೆಗೆ ನೆಲಕ್ಕೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು
  • whatsapp icon

ಹಾಸನ: ಬಿರುಗಾಳಿ-ಮಳೆಗೆ ತುಂಡಾಗಿ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ವಿದ್ಯುತ್ ಆಘಾತಕ್ಕೆ ಒಳಗಾಗಿ ಕೆಎಸ್ಸಾರ್ಟಿಸಿ ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಗರ ಹೊರ ವಲಯದ ಬಿಟಿ ಕೊಪ್ಪಲಿನಲ್ಲಿ ಸಂಭವಿಸಿದೆ.

ನಂದೀಶ್ (40) ಮೃತಪಟ್ಟವರು. ಶನಿವಾರ ರಾತ್ರಿ ಭಾರೀ ಗಾಳಿ ಮಳೆಯಿಂದ 11 ಕೆವಿ. ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ಆದರೆ ವಿದ್ಯುತ್ ಸಂಪರ್ಕ ಕಡಿತಗೊಂಡಿರಲಿಲ್ಲ. ಇದರ ಅರಿವಿಲ್ಲದ ನಂದೀಶ್ ಇಂದು ಬೆಳಗ್ಗೆ ವಾಕಿಂಗ್ ಗೆ ಹೋದಾಗ ಆಕಸ್ಮಿಕವಾಗಿ ಈ ತಂತಿಯನ್ನು ತುಳಿದಿದ್ದು ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News