ಹಾಸನ | ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಮ್ಯಾರಥಾನ್

ಹಾಸನ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ, ಡ್ರಗ್ಸ್ ಫ್ರೀ ಕರ್ನಾಟಕ, ಫಿಟ್ನೆಸ್ ಫಾರ್ ಅಲ್ ಹಾಗೂ ಎಂಬ ಶೀರ್ಷಿಕೆಯಡಿಯಲ್ಲಿ ಭಾನುವಾರ ಬೆಳಿಗ್ಗೆ ಹಾಸನ ನಗರದ ಡೇರಿ ಸರ್ಕಲ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಿಂದ ಪೊಲೀಸ್ ರನ್ ಮ್ಯಾರಾಥಾನ್ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಅವರ ನೇತೃತ್ವದಲ್ಲಿ ನಗರದ ಡೈರಿ ವೃತ್ತದಿಂದ ಸಾಲಗಾಮೆ ರಸ್ತೆಯ ಸುಬೇದಾರ್ ನಾಗೇಶ್ ಸರ್ಕಲ್ ವರೆಗೆ ನಡೆದ ಮ್ಯಾರಾಥಾನ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ಭಾಗವಹಿಸಿ ಗಮನ ಸೆಳೆದರು.
ಈ ವೇಳೆ ಎಸ್ಪಿ ಮೊಹಮ್ಮದ್ ಸುಜಿತಾ ಮಾತನಾಡಿ, ಅಪರಾಧ ತಡೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಗೆ ಸುಮಾರು 5 ಸಾವಿರ ಜನ ನೋಂದಾವಣಿ ಮಾಡಿಕೊಂಡಿದ್ದು, ಎಲ್ಲರೂ ಇಂದು ಜಾಥಾದಲ್ಲಿ ಭಾಗವಹಿಸಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಅಧಿಕಾರಿ ಸಿಬ್ಬಂದಿಗಳು ಸುಮಾರು 5 ಕಿಲೋ ಮೀಟರ್ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.