ಹಾಸನ | ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಚಿವ ಕೆ.ಎಚ್.ಮುನಿಯಪ್ಪ ಕಾರು ಅಪಘಾತ
Update: 2024-12-05 07:46 GMT
ಹಾಸನ: ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ.
ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಢಿಕ್ಕಿಯಾಗಿದೆ. ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.