ಹಾಸನ : ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
Update: 2024-02-20 17:15 GMT
ಹಾಸನ:ಇ-ಆಕ್ಟ್ ಮೂಲಕ ರೈತರ ಜಮೀನು ಹರಾಜು, ರೈತರ ಬೆಳೆ ಸಾಲಕ್ಕಾಗಿ ಟ್ರಾಕ್ಟರ್, ಟಿಲ್ಲರ್ ಹಾಗೂ ಬೋರ್ ವೆಲ್ ಸಾಮಾಗ್ರಿಗಳನ್ನು ಜಪ್ತಿ ಮಾಡುವುದನ್ನು ನಿಲ್ಲಿಸಬೇಕು ಅಲ್ಲದೆ ರೈತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬ್ಯಾಂಕ್ ಮತ್ತು ಡಿಸಿ ಕಛೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರತಿಮೆ ಬಳಿಯಿಂದ ಮೆರವಣಿಗೆ ಮೂಲಕ ಹೊರಟ ಪ್ರತಿಭಟನಾ ಮೆರವಣಿಗೆಯು ಮೊದಲು ಬ್ಯಾಂಕ್ ಮುಂದೆ ಪ್ರತಿಭಟಿಸಿದ ನಂತರ ಎನ್.ಆರ್. ವೃತ್ತಕ್ಕೆ ಬಂದು ಮಾನವ ಸರಪಳಿ ನಿರ್ಮಿಸಿದರು. ನಂತರ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ಬಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಮುಖಂಡ ಸ್ವಾಮಿಗೌಡ, ರಾಜ್ಯ ಉಪಾಧ್ಯಕ್ಷ ಕಣಗಾಲ್ ಮೂರ್ತಿ, ತಾಲೂಕು ಅಧ್ಯಕ್ಷ ಬಿ.ಎಂ. ಮಂಜುನಾಥ್, ಶಿವಣ್ಣ ಪಾರ್ವತಮ್ಮ, ಯೂಸೂಬ್ ಗೊರೂರು, ಹನುಮಂತಯ್ಯ, ರುದ್ರೇಗೌಡ, ಲಕ್ಷ್ಮಣ್ ಇತರರು ಉಪಸ್ಥಿತರಿದ್ದರು.