ಹಾಸನ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮೃತ್ಯು

Update: 2025-01-01 16:40 GMT

ಹಾಸನ: ಹೊಸ ವರ್ಷಾಚರಣೆ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ ಕಾನನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷಿಕ ಅಜಿತ್ (37) ಮತ್ತು ಆಟೋ ಚಾಲಕ ಅಶೋಕ್ (35) ಮೃತರು.

ಕಾನನಹಳ್ಳಿ ಗ್ರಾಮದ ಕೆರೆಯ ಬಳಿ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದ ಇಬ್ಬರೂ ಬೆಳಗಿನವರೆಗೂ ಮನೆಗೆ ಹಿಂತಿರುಗಿರಲಿಲ್ಲ. ಇದರಿಂದಾಗಿ ಕಳವಳಗೊಂಡ ಪೋಷಕರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ.

ಸ್ಥಳೀಯರು ಗುರುಪ್ರಸಾದ್ ಎಂಬವರ ಕೃಷಿ ಹೊಂಡದ ಬಳಿ ಬಿದ್ದಿದ್ದ ಚಪ್ಪಲಿ ಮತ್ತು ಮದ್ಯದ ಬಾಟಲಿಗಳನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅನುಮಾನಗೊಂಡು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಶೋಧಕಾರ್ಯ ಕೈಗೊಳ್ಳಲಾಯಿತು. ಇಂದು ಸಂಜೆ ಹೊಂಡದಲ್ಲಿ ಇಬ್ಬರ ಮೃತದೇಹ ಪತ್ತೆಯಾಯಿಗೆ.

ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು, ಬೇಲೂರು ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ತನಿಖೆ ಆರಂಭಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News