ಹಾಸನ ಲೋಕಸಭಾ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

Update: 2024-03-28 10:03 GMT

ಹಾಸನ: ಹಾಸನ ಲೋಕಸಭಾ ಜೆಡಿಎಸ್-ಬಿಜೆಪಿ ಮೈತ್ರಿಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗುರುವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಶಾಸಕರುಗಳಾದ ಎ ಮಂಜು, ಸಿ ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಪ್ರಜ್ವಲ್ ರೇವಣ್ಣ, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮಾರ್ಚ್ 4ನೇ ತಾರೀಕಿನಂದು ಬೃಹತ್ ರ‍್ಯಾಲಿ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ. ಈ ಸಂದರ್ಭದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಎಲ್ಲ ಹಿರಿಯ ನಾಯಕರುಗಳು ಉಪಸ್ಥಿತರಿರುತ್ತಾರೆ. ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ,  ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹಾಗೂ ಇತರ ಅನೇಕ ನಾಯಕರು  ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News