ಭಾರೀ ಮಳೆಗೆ ರಸ್ತೆ ಸಮೇತ ಕುಸಿದ ಭೂಮಿ : ಸಕಲೇಶಪುರ ತಾಲೂಕಿನ ಕುಂಬರಡಿ ಬಳಿ ಘಟನೆ

Update: 2024-07-30 15:14 IST
ಭಾರೀ ಮಳೆಗೆ ರಸ್ತೆ ಸಮೇತ ಕುಸಿದ ಭೂಮಿ : ಸಕಲೇಶಪುರ ತಾಲೂಕಿನ ಕುಂಬರಡಿ ಬಳಿ ಘಟನೆ
  • whatsapp icon

ಹಾಸನ : ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರಕ್ಕೆ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿ ತಾಲೂಕಿನ ಕುಂಬರಡಿ ಬಳಿ ರಸ್ತೆ ಸಮೇತ ಭೂಮಿ ಕುಸಿದಿದೆ.

ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂಕುಸಿತ ಉಂಟಾಗಿದ್ದು, 200 ಮೀಟರ್‌ಗೂ ಹೆಚ್ಚು ದೂರ ರಸ್ತೆ ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿಹೋಗಿದ್ದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ನಡೆಯುತ್ತಿದೆ.

ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತ ಉಂಟಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News