ಹಾಸನ | ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Update: 2025-01-09 17:13 IST
ಹಾಸನ | ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
  • whatsapp icon

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡ‌ರ್ ಬಿಲ್‌ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾಸನ ನಗರಸಭೆ ಆಯುಕ್ತ ಕಾರ್ಯಪಾಲಕ ಅಭಿಯಂತರ ನರಸಿಂಹಮೂರ್ತಿ, ಸಹಾಯಕ ಪರಿಸರ ಎಂಜಿನಿಯರ್ ಕೆ.ಆ‌ರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅಧಿಕಾರಿಗಳು ಇಂದು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಲಂಚದ ಹಣದ ಸಮೇತ ವಶಕ್ಕೆ ಪಡೆಯಲಾಗಿದೆ ಎಂಉ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News