ಹಾಸನ | ನದಿಯಲ್ಲಿ ಮುಳುಗಿ ದ್ವಿತೀಯ ಪಿಯು ವಿದ್ಯಾರ್ಥಿ ಮೃತ್ಯು

Update: 2025-03-05 00:20 IST
ಹಾಸನ | ನದಿಯಲ್ಲಿ ಮುಳುಗಿ ದ್ವಿತೀಯ ಪಿಯು ವಿದ್ಯಾರ್ಥಿ ಮೃತ್ಯು

 ರಘು (18)

  • whatsapp icon

ಹಾಸನ : ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಮಂಗಳವಾರ ನಡೆದಿರುವುದು ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಬಾಲಕರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಘು (18)ಎಂದು ಗುರುತಿಸಲಾಗಿದೆ.

ಮಂಗಳವಾರ ಈತ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬಳಿಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತಾಲೂಕಿನ ಹೇಮಾವತಿ ನದಿ ತೀರದಲ್ಲಿರುವ ಶೆಟ್ಟಿಹಳ್ಳಿ ಚರ್ಚ್‌ಗೆ ತೆರಳಿ ಫೋಟೋಶೂಟ್ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಹೇಮಾವತಿ ಜಲಾಶಯದ ಹಿನ್ನೀರಿಗೆ ಈಜಲು ಇಳಿದಾಗ, ಈಜಲು ಬಾರದ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಗೊರೂರು ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ರಘು ಮೃತದೇಹಕ್ಕಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News